Tuesday 28 August 2012

ಜೋಗದ ಸಿರಿ ಬೆಳಕಿನಲ್ಲಿ...

ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿನಿತ್ಯಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲ್ಲಿಗತಸಾಹಸ ಸಾರುತಿರುವ ಶಾಸನಗಳ ಸಾಲಿನಲ್ಲಿಓಲೆಗರಿಯ ಸಿರಿಗಳಲ್ಲಿ ದೇಗುಲಗಳ ಬಿತ್ತಿಗಳಲಿನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||

ಹಲವೆನ್ನದ ಹಿರಿಮೆಯೆ ಕುಲವೆನ್ನದ ಗರಿಮೆಯೆಸದ್ವಿಕಾಸ ಶೀಲ ನುಡಿಯ ಲೋಕಾವೃತ ಸೀಮೆಯೆಈ ವತ್ಸರ ನಿರ್ಮತ್ಸರ ಮನದುದಾರ ಮಹಿಮೆಯೆನಿತ್ಯೋತ್ಸವ ತಾಯೆ ನಿತ್ಯೋತ್ಸವ ನಿನಗೆ
ನಿತ್ಯೋತ್ಸವ ತಾಯೆ ನಿತ್ಯೋತ್ಸವ || ಜೋಗದ ||

1 comment: