Friday 10 August 2012

Morning Walk ....

ಉಠೋ ಯಾರ್, enough sleeping...' ಪ್ರಿಯಾ ಪ್ರೀತಿಯಲ್ಲಿಯೇ ಗದರುತ್ತ ಎಬ್ಬಿಸಿದಾಗ ನಿದ್ದೆಯಿನ್ನೂ ಸಿಹಿಸಿಹಿಯಾಗಿತ್ತು. ಸಮಯ ಇನ್ನೂ ಬೆಳಿಗ್ಗೆ 5.45 ಅಷ್ಟೇ. ಅಯ್ಯೋ ಇಷ್ಟು ಬೇಗ ಎದ್ದೇನು ಮಾಡೋಣ ಅಂತ ಮತ್ತೆ ಮಲಗಹೊರಟೆ. 'U had told me that we will go for a morning walk...' ನೆನಪಿಸಿದಳು. ಹೌದಲ್ಲಾ, ನಾನೇ ಹೇಳಿದ್ದೆ ಅವಳಿಗೆ. ಸೋಮಾರಿಯಂತೆ ಬಿದ್ದುಕೊಳ್ಳುವ ಅವಕಾಶಕ್ಕೆ ಕೈಯಾರ ಕಲ್ಲುಹಾಕಿಕೊಂಡಿದ್ದಕ್ಕೆ ನನಗೆ ನಾನೇ ಬೈದುಕೊಳ್ಳುತ್ತ ಎದ್ದೆ. ಮಳೆಯೂ ಕೈಕೊಟ್ಟಿದ್ದಳು, ಅವಳಾದರೂ ಬಂದಿದ್ದರೆ ಹೊರಗೆ ಹೋಗುವ ಮಾತೇ ಇರಲಿಲ್ಲ.

No comments:

Post a Comment